ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ತಂಡವು ನೇತ್ರಾವತಿ ನದಿ ತೀರದಲ್ಲಿರುವ ಮಂಗಳೂರಿನ ವಳಚ್ಚಿಲ್, ಬಂಟ್ವಾಳ ತಾಲೂಕಿನ ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸುಮಾರು ಮೌಲ್ಯ 46 ಲಕ್ಷ ರೂ ಮೌಲ್ಯದ ಬೋಟುಗಳನ್ನು ವಶ್ಕಕೆ ಪಡೆದುಕೊಂಡಿದ್ದಾರೆ.
ಮAಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಗಿರೀಶ್ ಮೋಹನ್, ಕೃಷ್ಣವೇಣಿ, ಮಹದೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.