ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಳೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪಚುನಾವಣೆ: ಬೆಳ್ತಂಗಡಿಯ 49 ಬೂತ್ ಗಳಲ್ಲಿ ಉಜಿರೆ ಸೂಕ್ಷ್ಮ ಮತ ಗಟ್ಟೆ: ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚುನಾವಣಾಧಿಕಾರಿ ಪ್ರಥ್ವಿ ಸಾನಿಕಂ:

ನಾಳೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪಚುನಾವಣೆ: ಬೆಳ್ತಂಗಡಿಯ 49 ಬೂತ್ ಗಳಲ್ಲಿ ಉಜಿರೆ ಸೂಕ್ಷ್ಮ ಮತ ಗಟ್ಟೆ: ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚುನಾವಣಾಧಿಕಾರಿ ಪ್ರಥ್ವಿ ಸಾನಿಕಂ:

 

 

 

 

ಬೆಳ್ತಂಗಡಿ: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯು ಅಕ್ಟೋಬರ್ 21 ರ ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ , ಎಂದು ಚುನಾವಣಾಧಿಕಾರಿ ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಮಾಹಿತಿ ನೀಡಿದರು. ಅವರು ಅ 20 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಚುನಾವಣಾ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು ಎಂಬ ನಿಟ್ಟಿನಲ್ಲಿ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದು ಕೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಪಟ್ಟಣ ಪಂಚಾಯತ್ ಸೇರಿದಂತೆ 49 ಗ್ರಾಮ ಪಂಚಾಯತ್ ನ ಮತಕೇಂದ್ರಗಳಲ್ಲಿ ಮತದಾನ ನಡೆಯಲಿದ್ದು ಮತ ಕೇಂದ್ರದ ನೂರು ಮೀಟರ್ ಅಂತರದಲ್ಲಿ ವಾಹನ ಸಂಚಾರಕ್ಕೆ ಹಾಗೂ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ

ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ನ ಮತ ಕೇಂದ್ರವನ್ನು ಸೂಕ್ಷ್ಮ ಮತ ಕೇಂದ್ರ ಎಂದು ಗುರುತಿಸಲಾಗಿದೆ. ಮತ ಚಲಾಯಿಸಲು ಬರುವ ಮತದಾರರು ಮೊಬೈಲ್ ಪೆನ್ನ್ ಸೇರಿದಂತೆ ಯಾವುದೇ ವಸ್ತುಗಳನ್ನು ಕೊಂಡು ಹೋಗಲು ಅವಕಾಶ ಇರುವುದಿಲ್ಲ,ಮತಗಟ್ಟೆ ಅಧಿಕಾರಿ ಮತಪತ್ರದೊಂದಿಗೆ ನೀಡುವ ನೇರಳೆ ಬಣ್ಣದ ಸ್ಕೆಚ್ ಪೆನ್ನ್ ನಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶ ಇರುತ್ತದೆ.ಎಂದು ತಿಳಿಸಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಈಗಾಗಲೇ ಪೊಲೀಸ್ ಇಲಾಖೆ ಕ್ರಮಗಳನ್ನು ಕೈಗೊಂಡಿದೆ ಎಂದು ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!