ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿರ್ಮಾಣ ಹಂತದಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ..!

ನಿರ್ಮಾಣ ಹಂತದಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ..!

ಬೆಂಗಳೂರು : ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿದ ಘಟನೆ ಅ.22ರಂದು ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಡೆದಿದ್ದು ಮೃತರ ಸಂಖ್ಯೆ ಐದಕ್ಕೇರಿದೆ.

ಘಟನಾ ಸ್ಥಳದಲ್ಲಿ ಎಸ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ಮತ್ತು ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದ ಅಮಾನ್, ಕೃಪಾಲ್, ಮೊಹಮ್ಮದ್ ಸಾಹಿಲ್, ಸತ್ಯರಾಜ್ ಸೇರಿದಂತೆ ನಾಲ್ವರ ಮೃತದೇಹಗಳನ್ನ ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಿಲ್‌ಗಳಡಿ ಸಿಲುಕಿಕೊಂಡಿದ್ದ ಅಯಾಜ್ ಎಂಬವರನ್ನು ಪತ್ತೆಹಚ್ಚಿದ ರಕ್ಷಣಾ ಸಿಬ್ಬಂದಿ, ಗ್ಯಾಸ್ ಕಟ್ಟರ್ ಬಳಸಿ ಗ್ರಿಲ್ ಕತ್ತರಿಸಿ ಅವರನ್ನು ಜೀವಂತವಾಗಿ ಹೊರತೆಗೆದಿದ್ದಾರೆ. ಬಳಿಕ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.

ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!