Home › ‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’: ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ..!: ಸ್ಥಳಕ್ಕೆ ಪೊಲೀಸ್, ಶ್ವಾನ ದಳ ದೌಡು
‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’: ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ..!: ಸ್ಥಳಕ್ಕೆ ಪೊಲೀಸ್, ಶ್ವಾನ ದಳ ದೌಡು
ONLINE PUDU / Monday, October 28, 2024

ಆಂಧ್ರಪ್ರದೇಶ: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಅ.27ರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.
‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’ ಎಂದು ಹೇಳುವ ಇಮೇಲ್ ಒಂದು ದೇವಸ್ಥಾನದ ಸಿಬ್ಬಂದಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದು, ಬಾಂಬ್ ಬೆದರಿಕೆ ಬಂದಿರುವ ಮಾಹಿತಿ ಸಿಕ್ಕಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಮತ್ತು ಶ್ವಾನ ದಳದ ತಂಡಗಳು ದೇವಸ್ಥಾನಕ್ಕೆ ಆಗಮಿಸಿ ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಸದ್ಯ, ದೇವಸ್ಥಾನದ ಆವರಣದಲ್ಲಿ ಯಾವುದೇ ಸ್ಫೋಟಕ ಸೇರಿದಂತೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.