ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಲ್ಪ ಕಾಲದ ಅನಾರೋಗ್ಯ,ಲಾಯಿಲ ಪಡ್ಲಾಡಿ ನಿವಾಸಿ ರೋಹಿತ್ ನಿಧನ

ಅಲ್ಪ ಕಾಲದ ಅನಾರೋಗ್ಯ,ಲಾಯಿಲ ಪಡ್ಲಾಡಿ ನಿವಾಸಿ ರೋಹಿತ್ ನಿಧನ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ಸಮೀಪದ ಕೊರತ್ತಿಕಜೆ ದಿ. ಆಲ್ಫೋನ್ಸ್ ಡಿಸೋಜ ಅವರ ಮಗ ರೋಹಿತ್ ರಾಯನ್ ಡಿಸೋಜ ( 40) ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ಶುಕ್ರವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಿಗ್ಗೆ ಸಾವನ್ಪಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ಲಾಯಿಲ ಗ್ರಾಮದ ಬೂತ್ ಸಮಿತಿ ಅಧ್ಯಕ್ಷನಾಗಿದ್ದ ಅವರು ಹಲವಾರೂ ಸಂಘ ಸಂಸ್ಥೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಸೋಮವಾರ ಬೆಳ್ತಂಗಡಿ ಚರ್ಚ್ ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!