ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಂಚೆ ಧರಿಸಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಟ ರಿಷಬ್ ಶೆಟ್ಟಿ: ಸಾಂಪ್ರದಾಯಿಕ ಗೆಟಪ್‌ನಲ್ಲಿ ಗಮನ ಸೆಳೆದ ಡಿವೈನ್ ಸ್ಟಾರ್

ಪಂಚೆ ಧರಿಸಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಟ ರಿಷಬ್ ಶೆಟ್ಟಿ: ಸಾಂಪ್ರದಾಯಿಕ ಗೆಟಪ್‌ನಲ್ಲಿ ಗಮನ ಸೆಳೆದ ಡಿವೈನ್ ಸ್ಟಾರ್

ದೆಹಲಿ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಟ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಂಪ್ರದಾಯಿಕ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಅವರಿಗೆ ಅ.08ರಂದು ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದ್ದು ದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪಂಚೆ ಧರಿಸಿ ತೆರಳಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರಿಷಬ್ ಶೆಟ್ಟಿ ಅವರು ನಮ್ಮ ನೆಲದ ಸೊಗಡಿಗೆ ಹೆಚ್ಚು ಬೆಲೆ ನೀಡುತ್ತಾರೆ. ಅವರು ತಮ್ಮ ಸಿನಿಮಾಗಳಲ್ಲೂ ಈ ಸೊಗಡನ್ನು ಬಳಸಿಕೊಳ್ಳುತ್ತಾರೆ. ಬದುಕಿನ ಬಹುತೇಕ ದಿನಗಳು ಕಷ್ಟ, ಸೋಲುಗಳ ಅನುಭವವನ್ನೇ ನೀಡಿದ್ದರು ಈಗ ದೇಶ, ವಿದೇಶದಲ್ಲಿ ಪ್ರಖ್ಯಾತಿ ಪಡೆಯುತ್ತಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಇವರು ಎಷ್ಟೇ ಫೇಮ್ ಸಿಕ್ಕರೂ ಈ ನೆಲೆದ ಸೊಗಡನ್ನು ಮರೆತಿಲ್ಲ ಎಂಬುದೇ ವಿಶೇಷ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!