ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ಕಾರ್ಯಕರ್ತ, ಮಾಜಿ ಕಾರ್ಯದರ್ಶಿ ನಾರಾಯಣ ಆಚಾರ್ ನಿಧನ:

ಬಿಜೆಪಿ ಕಾರ್ಯಕರ್ತ, ಮಾಜಿ ಕಾರ್ಯದರ್ಶಿ ನಾರಾಯಣ ಆಚಾರ್ ನಿಧನ:

 

 

 

ಬೆಳ್ತಂಗಡಿ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ, ಕುವೆಟ್ಟು ನಿವಾಸಿ ನಾರಾಯಣ ಆಚಾರ್ (55ವ) ಅವರು ಶುಕ್ರವಾರ ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಗುರುವಾಯನಕೆರೆ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ಹಲವಾರೂ ವರುಷ ತನ್ನನ್ನು ತಾನು ತೊಡಗಿಸಿಕೊಂಡಿದ್ದ ನಾರಾಯಣ ಆಚಾರ್ ಅವರು ತಂದೆ, ತಾಯಿ,ಪತ್ನಿ, ಪುತ್ರ ಪುತ್ರಿಯರು , ಕುಟುಂಬಸ್ಥರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!