ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳ ಮಾರಣಹೋಮ..!: ಕಲುಷಿತ ನೀರಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡ ಜಲಚರಗಳು...!

ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳ ಮಾರಣಹೋಮ..!: ಕಲುಷಿತ ನೀರಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡ ಜಲಚರಗಳು...!

ಆನೇಕಲ್: ರಾಸಾಯನಿಕಯುಕ್ತ ಕಲುಷಿತ ನೀರು ಹರಿದ ಪರಿಣಾಮ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳ ಮಾರಣಹೋಮ ನಡೆದ ಘಟನೆ ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಾಗಮಂಗಲ ಕೆರೆಯಲ್ಲಿ ಅ.18ರಂದು ಸಂಭವಿಸಿದೆ.

ಬಯೋಕಾನ್ ಪ್ರತಿಷ್ಠಾನದ ಮೂಲಕ ಚಿಕ್ಕನಾಗಮಂಗಲ ಕೆರೆಯನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದನ್ನು ಬಯೋಕಾನ್ ಕೆರೆ ಎಂದೇ ಕರೆಯಲಾಗುತ್ತಿದೆ. ಈ ಕೆರೆಯಲ್ಲಿ ಲಕ್ಷಾಂತರ ಮೀನುಗಳಿದ್ದು ಆದರೆ ತ್ಯಾಜ್ಯ ನೀರು ಹರಿದ ಪರಿಣಾಮ ಕೆರೆಯಲ್ಲಿನ ಜಲಚರಗಳಿಗೆ ಹಾನಿಯುಂಟಾಗಿದೆ ಎನ್ನಲಾಗುತ್ತಿದೆ.

ಕೆರೆಗೆ, ಸುತ್ತಮುತ್ತಲಿನ ಅಪಾರ್ಟ್ಮೆಂಟ್ ಮತ್ತು ಬಡಾವಣೆಗಳ ತ್ಯಾಜ್ಯ ನೀರು ಹಾಗೂ ಸಮೀಪದಲ್ಲಿರುವ ಬಿಬಿಎಂಪಿ ಘನತ್ಯಾಜ್ಯ ಘಟಕದ ಕಲುಷಿತ ನೀರು ಈ ಕೆರೆಗೆ ಸೇರಿದ ಕಾರಣ ಕಳೆದ ಮೂರು ದಿನಗಳಿಂದ ಮೀನುಗಳು ಒದ್ದಾಡಿ, ಒದ್ದಾಡಿ ಮೃತಪಟ್ಟಿವೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಘಟನೆಯ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!