Home › ಕೊಕ್ರಾಡಿ: ಓಮ್ನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ..!
ಕೊಕ್ರಾಡಿ: ಓಮ್ನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ..!
ONLINE PUDU / Wednesday, October 16, 2024
ಬೆಳ್ತಂಗಡಿ: ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕೊಕ್ರಾಡಿ ಗ್ರಾಮದ ಕುಂಟಾಲ್ಕಟ್ಟೆ ಕ್ರಾಸ್ ನಲ್ಲಿ ಅ.16ರ ಮಧ್ಯಾಹ್ನ ಸಂಭವಿಸಿದೆ.
ಎರಡು ವಾಹನಗಳು ಮುಖಾ-ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಹೇಮಚಂದ್ರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಕ್ರಾಡಿ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದೆ, ಮತ್ತೆ ಇಂತಹ ಅಪಘಾತ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.