ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರು ಸಿಬ್ಬಂದಿಗಳು ಸಾವನ್ನಪ್ಪಿರುವ ಶಂಕೆ..!

ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರು ಸಿಬ್ಬಂದಿಗಳು ಸಾವನ್ನಪ್ಪಿರುವ ಶಂಕೆ..!

ಪುಣೆ: ಬವ್ಧಾನ್ ಪ್ರದೇಶದಲ್ಲಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಿಬ್ಬಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಪುಣೆ ನಗರ ಪ್ರದೇಶದಲ್ಲಿ ಮಂಜು ಕವಿದಿದ್ದು, ಈ ಹಿನ್ನೆಲೆ ಹೆಲಿಕಾಪ್ಟರ್ ಪತನಗೊಂಡಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಆಕ್ಸ್ಫರ್ಡ್ ಗಾಲ್ಫ್ ಕ್ಲಬ್‌ನಲ್ಲಿರುವ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ನಂತರ ಹೆಲಿಕಾಪ್ಟರ್ ಪತನಗೊಂಡಿದೆ. ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಒಬ್ಬ ಇಂಜಿನಿಯರ್ ಹಾಗೂ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು, ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!