ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ‘ಪ್ರೀತ್ಸೆ’ ಎಂದು ವಾಟ್ಸಾಪ್ ಮೆಸೆಜ್ ನಲ್ಲಿ ಕಿರುಕುಳ: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

‘ಪ್ರೀತ್ಸೆ’ ಎಂದು ವಾಟ್ಸಾಪ್ ಮೆಸೆಜ್ ನಲ್ಲಿ ಕಿರುಕುಳ: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

ಚಿತ್ರದುರ್ಗ: ‘ಪ್ರೀತ್ಸೆ’ ಎಂದು ವಾಟ್ಸಾಪ್ ಮೆಸೆಜ್ ನಲ್ಲಿ ಯುವಕನೋರ್ವ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು ಇದರಿಂದ ಮನನೊಂದ ವಿದ್ಯಾರ್ಥಿನಿ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತರುಣ್ ಎಂಬಾತ ಪ್ರೀತಿ ಮಾಡುವಂತೆ ಮೃತ ಪ್ರೇಮಾಳಿಗೆ ಪೀಡುಸುತ್ತಿದ್ದ ಎನ್ನಲಾಗಿದೆ. ವಾಟ್ಸ್ ಆಪ್ ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತನ ಕಾಟಕ್ಕೆ ಬೇಸತ್ತು ಯುವತಿ ಅ.18ರಂದು ಕಾಲೇಜು ಕಟ್ಟಡದ ಮೇಲಿಂದ ಜಿಗಿದು  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಘಟನೆ ಸಂಬಂಧಿಸಿದಂತೆ ತರುಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!