ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭ

ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ.

ಒಂದು ಕೊಠಡಿಯಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 392 ಮತ ಪೆಟ್ಟಿಗೆಗಳು ಇದ್ದು, ಪ್ರತಿ ಟೇಬಲ್‌ಗೆ 33 ರಂತೆ ಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ.

ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು 'ಡಿ' ಗ್ರೂಪ್ ಸಿಬ್ಬಂದಿ ಇದ್ದಾರೆ.

ಮತಪೆಟ್ಟಿಗೆಗಳನ್ನು ತೆರೆದು ಒಟ್ಟು ಮತಪತ್ರಗಳ ಮಿಶ್ರಣದ ಬಳಿಕ ಎಣಿಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ಮತ ಎಣಿಕೆ ಸ್ಥಳದಲ್ಲಿ ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!