ದರ್ಶನ್ ಪರ ವಕೀಲರು “ನಟ ದರ್ಶನ್‌ಗೆ ಆರೋಗ್ಯ ತೀವ್ರ ಹದಗೆಟ್ಟಿದೆ. ಇದೀಗ ಶಸ್ತ್ರ ಚಿಕಿತ್ಸೆ ನಡೆಯದಿದ್ದರೇ ಪಾರ್ಶ್ವವಾಯುವಿಗೆ ಗುರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮದ್ಯಂತರ ಜಾಮೀನು ನೀಡಬೇಕು ಎಂದು ಕೋರಿದ್ದರು”. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಈ ಆದೇಶ ನೀಡಿದ್ದಾರೆ.
ದರ್ಶನ್ ಇಚ್ಚಿಸಿದ ಆಸ್ಪತ್ರೆಯಲ್ಲಿ ದಾಖಲಾಗಬಹುದು. ಮುಂದಿನ ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು. ಸಾಕ್ಷ್ಯಗಳ ನಾಶಕ್ಕೆ ಮುಂದಾಗಬಾರದು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ನ್ಯಾಯಾಲಯ ಸೂಚನೆ ಇಲ್ಲದೇ ವ್ಯಾಪ್ತಿ ಬಿಟ್ಟು ಹೊರಕ್ಕೆ ಹೋಗಬಾರದು