ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ: ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಬೇಕು,ಡಾ. ರಮೇಶ್ .

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ: ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಬೇಕು,ಡಾ. ರಮೇಶ್ .

 

 

ಬೆಳ್ತಂಗಡಿ : ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಸಮುದಾಯ ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ. ರಮೇಶ್ ಹೇಳಿದರು.

 

 

ಅವರು ಗುರುವಾರ ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿದರು.

 

 

ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು. 160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. ಐದು ಕಿಲೋಮೀಟರ್ ಪೂರೈಸಿದ ಮೊದಲ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

 

 

ಮನೋವಿಜ್ಞಾನ ಸ್ನಾತಕೋತ್ತರ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮೂಲಕ ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಮದ್ಯವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಪೂರನ್ ವರ್ಮ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ವಂದನಾ ಜೈನ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಹೆಚ್ ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ಎಚ್., ಡಾ. ಮಹೇಶ್‌ಬಾಬು, ಅಶ್ವಿನಿ ಶೆಟ್ಟಿ. ಸಿಂಧು, ವಿ.ರಮ್ಯಾ ಕೆ ಮತ್ತು ಡಾ. ಸುಧೀರ್ ಕೆ.ವಿ. ಉಪಸ್ಥಿತರಿದ್ದು ಸಹಕರಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!