ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಕ್ರಮ ಗೋಸಾಟ : ಇಬ್ಬರು ಪೊಲೀಸ್ ವಶ..! ಬೆಳ್ತಂಗಡಿ ಪೊಲೀಸರಿಂದ ಕಾರ್ಯಾಚರಣೆ

ಅಕ್ರಮ ಗೋಸಾಟ : ಇಬ್ಬರು ಪೊಲೀಸ್ ವಶ..! ಬೆಳ್ತಂಗಡಿ ಪೊಲೀಸರಿಂದ ಕಾರ್ಯಾಚರಣೆ

ಬೆಳ್ತಂಗಡಿ: ಅಕ್ರಮವಾಗಿ ಗೋಸಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ತಡೆದು ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅ.18ರ ರಾತ್ರಿ ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಎರಡು ದನಗಳನ್ನು, ಒಂದು ಕರು, ಹಾಗೂ ಒಂದು ಹೋರಿಯನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆ ಬೆಳ್ತಂಗಡಿ ಪೊಲೀಸರು ಮದ್ದಡ್ಕದಲ್ಲಿ ವಾಹನ ಪರಿಶೀಲನೆ ನಡೆಸಿದ್ದು, ಈ ವೇಳೆ ಅಕ್ರಮ ಗೋ ಸಾಗಾಟ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಎಂಬವರಾಗಿದ್ದಾರೆ.

ಆರೋಪಿಗಳ ಬಳಿ ಯಾವುದೇ ಸೂಕ್ತ ದಾಖಲೆಗಳು ಇಲ್ಲದ ಹಿನ್ನಲೆಯಲ್ಲಿ ಅವರನ್ನು ಬಂಧಿಸಿದ ಪೊಲೀಸರು ದನಗಳನ್ನು ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!