ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.

2023ರ ಜೂನ್ 23ರಂದು ಬಾಲಕಿಯನ್ನು ಆರೋಪಿಯು ಹುಟ್ಟು ಹಬ್ಬದ ನೆಪದಲ್ಲಿ ತಮ್ಮ ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಇರುವ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತಲ್ಲದೆ, ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ನಾಗೇಶ್ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯ ಒಟ್ಟು 12 ಸಾಕ್ಷಿಗಳನ್ನು ವಿಚಾರಣೆ ಮಾಡಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ಎರಡನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಮನು ಕೆ. ಎಸ್. ಅವರಿದ್ದ ನ್ಯಾಯಪೀಠ ಆರೋಪಿಯನ್ನು ಖುಲಾಸೆಗೊಳಿಸಿ ಈ ತೀರ್ಪು ನೀಡಿದೆ.

ಆರೋಪಿಯ ಪರವಾಗಿ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ವಾದ ಮಂಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!