ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಟ್ಟ ಮಾತನ್ನು ಉಳಿಸಿಕೊಂಡ ಹೆಚ್‌ಡಿ ಕುಮಾರಸ್ವಾಮಿ: ಶಿರೂರು ಗುಡ್ಡ ಕುಸಿತ ಹೋಟೆಲ್ ಮಾಲೀಕನ ಪುತ್ರಿಗೆ ಉದ್ಯೋಗ

ಕೊಟ್ಟ ಮಾತನ್ನು ಉಳಿಸಿಕೊಂಡ ಹೆಚ್‌ಡಿ ಕುಮಾರಸ್ವಾಮಿ: ಶಿರೂರು ಗುಡ್ಡ ಕುಸಿತ ಹೋಟೆಲ್ ಮಾಲೀಕನ ಪುತ್ರಿಗೆ ಉದ್ಯೋಗ

ಉತ್ತರ ಕನ್ನಡ: ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ಪೋಷಕರನ್ನು ಕಳೆದುಕೊಂಡ ಹೋಟೆಲ್ ಮಾಲೀಕ ಜಗನಾಥ್ ಅವರ ಪುತ್ರಿ ಎನ್. ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಬಿಹೆಚ್‌ಇಎಲ್‌ನಲ್ಲಿ ಉದ್ಯೋಗ ಕಲ್ಪಿಸಿದ್ದಾರೆ.

ಮಂಡ್ಯದ ಸರ್‌ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದ ಉದ್ಯೋಗ ಮೇಳದ ವೇದಿಕೆ ಕಾರ್ಯಕ್ರಮ ಆರಂಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ನೇಮಕಾತಿ ಪತ್ರ ನೀಡಿದರು.

ಶಿರೂರು ಗುಡ್ಡ ಕುಸಿತ ಘಟನೆ ಬಳಿಕ ಹೆಚ್‌ಡಿ ಕುಮಾರಸ್ವಾಮಿ ಅವರು ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್‌ಇಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಕೃತಿ ದೂರವಾಣಿ ಕರೆ ಮಾಡಿ ಹೇಳಿದ್ದರು. ಅಂದು ಕೊಟ್ಟ ಭರವಸೆಯನ್ನ ಇಂದು ಈಡೇರಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!