ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಡಾ.ಕಸ್ತೂರಿ ರಂಗನ್ ವರದಿ ತಿರಸ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ: ಯೋಜನೆ ಕೈಬಿಡಲು ಕಾರಣ ತಿಳಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್

ಡಾ.ಕಸ್ತೂರಿ ರಂಗನ್ ವರದಿ ತಿರಸ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ: ಯೋಜನೆ ಕೈಬಿಡಲು ಕಾರಣ ತಿಳಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು: ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ.ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನೇ ಮುಂದುವರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಪಶ್ಚಿಮಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಕೇಂದ್ರ ಸರ್ಕಾರವು 2024ರ ಜುಲೈ 31ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಲ್ಲಿಸುವಂತೆ ರಾಜ್ಯಗಳಿಗೆ ಸೂಚಿಸಿತ್ತು. ವರದಿಯು 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲವು ಲೋಪಗಳನ್ನು ತಿದ್ದುಪಡಿ ಮಾಡಿದಾಗ, 19,252.70 ಚ.ಕಿ.ಮೀ ಪರಿಸರ ಸೂಕ್ಷ್ಮ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ ಕಾರಣ ಕಸ್ತೂರಿರಂಗನ್ ವರದಿ ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!