ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮನೆಯ ಸೆಕ್ಯುರಿಟಿ ಗಾರ್ಡ್ ನಿಂದಲೇ ಮನೆಯಲ್ಲಿ ಕಳ್ಳತನ..! 15.15 ಕೋಟಿ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿ..!

ಮನೆಯ ಸೆಕ್ಯುರಿಟಿ ಗಾರ್ಡ್ ನಿಂದಲೇ ಮನೆಯಲ್ಲಿ ಕಳ್ಳತನ..! 15.15 ಕೋಟಿ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿ..!

ಬೆಂಗಳೂರು: ಮನೆಯ ಸೆಕ್ಯುರಿಟಿ ಗಾರ್ಡ್ ನಿಂದಲೇ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅರಿಹಂತ್ ಜ್ಯುವೆಲ್ಲರ್ಸ್ ಮಾಲೀಕ ಸುರೇಂದ್ರ ಕುಮಾರ್ ಜೈನ್ ಅವರ ಚಿನ್ನದ ಮಳಿಗೆಯಲ್ಲಿ ನೇಪಾಳ ಮೂಲದ ನಮ್ರಾಜ್ ಕಳೆದ  6 ತಿಂಗಳಿನಿಂದ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಆತನಿಗೆ ಉಳಿದುಕೊಳ್ಳಲು ತಮ್ಮದೇ ಮನೆಯಲ್ಲಿ ಒಂದು ರೂಮ್ ಸಹ ನೀಡಿದ್ದರು. ಹೀಗಾಗಿ ಸೆಕ್ಯೂರಿಟಿ ಗಾರ್ಡ್ ಕೆಲಸದ ಜೊತೆಗೆ ಸುರೇಂದ್ರ ಕುಮಾರ್ ಜೈನ್ ಅವರ ಮನೆಯ ಗಾರ್ಡನ್‌ನಲ್ಲಿ ಗಿಡಗಳಿಗೆ ನೀರು ಹಾಕುವುದು ಸೇರಿದಂತೆ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದ.

ನವೆAಬರ್ 1ರಂದು ಜಾತ್ರೆಯ ನಿಮಿತ್ತ ಸುರೇಂದ್ರ ಕುಮಾರ್ ಜೈನ್ ಅವರ ಕುಟುಂಬ ಗುಜರಾತ್‌ನ ಗಿರ್ನಾರಿಗೆ ತೆರಳಿತ್ತು. ಈ ವೇಳೆ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿದಂತೆ ಸುಮಾರು 15.15 ಕೋಟಿ ಮೌಲ್ಯದ ವಸ್ತುಗಳನ್ನು ನಮ್ರಾಜ್ ದೋಚಿ ಪರಾರಿಯಾಗಿದ್ದಾನೆ.

ನವೆಂಬರ್ 7ರಂದು ಸುರೇಂದ್ರ ಕುಮಾರ್ ಜೈನ್ ಅವರ ಕುಟುಂಬ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ವಿಜಯನಗರ ಪೊಲೀಸ್ ಠಾಣೆಗೆ ಸುರೇಂದ್ರ ಕುಮಾರ್ ಜೈನ್ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್, ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!