ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಕಾರು ಚಾಲಕ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್: 2.5 ಲಕ್ಷ ರೂ. ದಂಡ ವಿಧಿಸಿ ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಿದ ಪೊಲೀಸರು

ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಕಾರು ಚಾಲಕ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್: 2.5 ಲಕ್ಷ ರೂ. ದಂಡ ವಿಧಿಸಿ ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಿದ ಪೊಲೀಸರು

ಕೇರಳ: ರೋಗಿಯನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಕಾರು ಚಲಾಯಿಸಿದ ಕಾರು ಚಾಲಕನಿಗೆ 2.5 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೊಬ್ಬರನ್ನು ಶೀಘ್ರದಲ್ಲೇ ಆಸ್ಪತ್ರೆಗೆ ತಲುಪಿಸಬೇಕಾಗಿತ್ತು. ಹೀಗಾಗಿ ಆಂಬ್ಯುಲೆನ್ಸ್ ಚಾಲಕ ಸೈರನ್ ಹಾಕಿಕೊಂಡಿದ್ದರು. ಬಹುತೇಕ ಎಲ್ಲ ವಾಹನಗಳು ದಾರಿ ಬಿಟ್ಟುಕೊಟ್ಟರೂ ಈ ಕಾರು ಚಾಲಕ ಮಾತ್ರ ಬಿಟ್ಟುಕೊಟ್ಟಿರಲಿಲ್ಲ. ಕಾರು ಚಾಲಕ ಪಕ್ಕಕ್ಕೆ ಸರಿಯದೆ ಸತಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ಗಮನಿಸಿದ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.

ಪೊಲೀಸರು ಮೊದಲು ಕಾರು ಮಾಲೀಕನನ್ನು ಪತ್ತೆ ಹಚ್ಚಿ, ನೇರವಾಗಿ ಆತನ ಮನೆಗೆ ತೆರಳಿ 2.5 ಲಕ್ಷ ರೂ. ದಂಡ ವಿಧಿಸಿದ್ದಷ್ಟೇ ಅಲ್ಲದೆ, ಆತನ ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ರಸ್ತೆ ಸುರಕ್ಷತಾ ನಿಯಮಗಳು ಮತ್ತು ಕಾನೂನುಗಳಡಿಯಲ್ಲಿ  ಆಂಬ್ಯುಲೆನ್ಸ್ ಗಳಿಗೆ ದಾರಿ ಮಾಡಿಕೊಡುವುದು ಒಂದು ಪ್ರಮುಖ ಅಂಶವಾಗಿದೆ ಮತ್ತು ದಾರಿ ಬಿಡದವರು ಶಿಕ್ಷಾರ್ಹರು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!