ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ: ನ.29 ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ: ನ. 30ರಂದು ಸಾಹಿತ್ಯ ಸಮ್ಮೇಳನ

ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ: ನ.29 ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ: ನ. 30ರಂದು ಸಾಹಿತ್ಯ ಸಮ್ಮೇಳನ

ಬೆಳ್ತಂಗಡಿ: ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರವು ನ.26 ರಿಂದ ನ.30 ವರೆಗೆ ಹಾಗೂ ಡಿ. 1 ರಂದು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ಜರಗಲಿದೆ.

5 ದಿನದ ನಡೆಯಲಿರುವ ಕಾರ್ಯಕ್ರಮಗಳ ವಿವರ ಹೀಗಿದೆ.

ನ.28 - ಲಲಿತಕಲಾ ಗೋಷ್ಠಿ ಶ್ರೀ ಕ್ಷೇತ್ರ ಧರ್ಮಸ್ಥಳ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವದ ಸಂದರ್ಭ ಲಲಿತಾಗೋಷ್ಠಿ ನಡೆಸಲಾಗುತ್ತಿದೆ. ನ.28 ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5-30 ರಿಂದ ನಾಗಸ್ವರ ವಾದನ, 7 ರಿಂದ ಸಾತ್ವಿಕ ಸಂಗೀತ, ಗಂಟೆ 8 ರಿಂದ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ. ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂದರ್ಭ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ನ.29 ರಂದು ಸಂಜೆ 5 ಗಂಟೆಯಿAದ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನವನ್ನು ರಾಜ್ಯ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ಉದ್ಘಾಟಿಸುವರು. ಬೆಂಗಳೂರು ರಾಜರಾಜೇಶ್ವರೀ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬಳಿಕ ಸಂಶೋಧಕ ಡಾ. ಜಿ.ಬಿ.ಹರೀಶ, ನಿವೃತ್ತ ಉಪನ್ಯಾಸಕ ಡಾ.ಜೋಸೆಫ್ ಎನ್.ಎಂ., ಶಿಕ್ಷಕ ಮೆಹತಾಬ ಇಬ್ರಾಹಿಮ್ ಸಾಬ ಕಾಗವಾಡ ಅವರಿಂದ ಉಪನ್ಯಾಸ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ 8-30 ರಿಂದ ಭರತನಾಟ್ಯ ನೆರವೇರಲಿದೆ.

ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ

ನ.30 ರಂದು ಸಂಜೆ 5 ಗಂಟೆಯಿAದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನನೀ ಡಾ. ರಾ. ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ. ಬಿ.ವಿ.ವಸಂತ ಕುಮಾರ್ ಮೈಸೂರು, ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ 8-30 ರಿಂದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿAದ ಸಂಗೀತ ಸಂಜೆ ನೆರವೇರಲಿದೆ. ಪ್ರತಿದಿನ ಸಂಜೆ 6-30 ರಿಂದ ರಾತ್ರಿ 11ರ ವರೆಗೆ ವಸ್ತು ಪ್ರದರ್ಶನ ಮಂಟಪದಲ್ಲಿ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ-ಸAಗೀತ ಹಬ್ಬವೇ ನೆರವೇರಲಿದೆ.

ಲಕ್ಷದೀಪೋತ್ಸವದ ಪ್ರಯುಕ್ತ ಪಾದಯಾತ್ರೆ ನ.26 ರಂದು ಮಂಗಳವಾರ 3 ಗಂಟೆಗೆ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ವಿ.ಪ.ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಮಾಜಿ ವಿ.ಪ.ಶಾಸಕ ಹರೀಶ್ ಕುಮಾರ್ ನೇತೃತ್ವದಲ್ಲಿ 25000 ಕ್ಕೂ ಮಿಕ್ಕಿ ಊರ-ಪರವೂರಿನ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು. ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ ನ.26 ರಿಂದ ಡಿ.1 ರವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ನ.26ರಂದು ಬೆಳಗ್ಗೆ 10-30ಕ್ಕೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಉದ್ಘಾಟಿಸಲಿರುವರು. ವಸ್ತು ಪ್ರದರ್ಶನದಲ್ಲಿ ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿ ಕೈಗಾರಿಕೆಗಳಿಗೆ ಸಂಬAಧಿಸಿದ 300ಕ್ಕೂ ಮಿಕ್ಕಿ ಮಳಿಗೆಗಳಿರಲಿವೆ. ಲಕ್ಷದೀಪೋತ್ಸವ ಉತ್ಸವಗಳು

ಲಕ್ಷದೀಪೋತ್ಸವ ಪ್ರಯುಕ್ತ ಮಂಜುನಾಥ ಸ್ವಾಮಿಗೆ ನ.26: ಹೊಸ ಕಟ್ಟೆ ಉತ್ಸವ. ನ.27: ಕೆರೆ ಕಟ್ಟೆ ಉತ್ಸವ. ನ.28: ಲಲಿತೋದ್ಯಾನ ಉತ್ಸವ. ನ.29: ಕಂಚಿಮಾರು ಕಟ್ಟೆ ಉತ್ಸವ. ನ.30: ಗೌರಿಮಾರು ಕಟ್ಟೆ ಉತ್ಸವ ಡಿ.1-ಸಮವಸರಣ ಪೂಜೆ. ಸಂಜೆ 6-30 ರಿಂದ ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಜಿನಗಾನೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೇಮಾವತಿ ವೀ.ಹೆಗ್ಗಡೆ, ಪ್ರೊ.ಎಸ್.ಪ್ರಭಾಕರ್, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ಸಹಿತ ಸಮಿತಿ ಸ್ವಾಗತ ಸಮಿತಿ ಪ್ರಮುಖರು ಉಪಸ್ಥಿತರಿರುವರು ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!