Home › ಬೆಳ್ತಂಗಡಿ : ಗ್ರಾಮ ಪಂಚಾಯತ್ 3 ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ
ಬೆಳ್ತಂಗಡಿ : ಗ್ರಾಮ ಪಂಚಾಯತ್ 3 ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ
ONLINE PUDU / Tuesday, November 26, 2024
ಬೆಳ್ತಂಗಡಿ: ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆಲುವು ಸಾಧಿಸಿದ್ದಾರೆ.
ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ಹಾಗೂ ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕುಸುಮ ಈಶ್ವರ ಗೌಡರವರು ಜಯಗಳಿಸಿದ್ದಾರೆ.