ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಧರ್ಮಸ್ಥಳಕ್ಕೆ ಭೇಟಿ: ಸ್ವ ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಧರ್ಮಸ್ಥಳಕ್ಕೆ ಭೇಟಿ: ಸ್ವ ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣೆ

ಬೆಳ್ತಂಗಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನ.14ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಎಸ್.ಎಸ್. ಅವರು, ಸಚಿವೆ ನಿರ್ಮಲಾ ಸೀತಾರಾಮನ್, ಬೆಳಗ್ಗೆ 10ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿಕೊಳ್ಳಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ ಶಾಜಿ, ಕೆ.ವಿ. ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!