ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ‘ಕಾಂತಾರ' ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ..!: ಚಿತ್ರೀಕರಣಕ್ಕಾಗಿ ಕೊಲ್ಲೂರಿಗೆ ತೆರಳುವಾಗ ಘಟನೆ: 6 ಜನರಿಗೆ ಗಂಭೀರ ಗಾಯ..!

‘ಕಾಂತಾರ' ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ..!: ಚಿತ್ರೀಕರಣಕ್ಕಾಗಿ ಕೊಲ್ಲೂರಿಗೆ ತೆರಳುವಾಗ ಘಟನೆ: 6 ಜನರಿಗೆ ಗಂಭೀರ ಗಾಯ..!

ಕೊಲ್ಲೂರು: 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿರುವ ಘಟನೆ ಕೊಲ್ಲೂರು ಸಮೀಪ ಜಡ್ಕಳ್ ಬಳಿ ಸಂಭವಿಸಿದೆ.

ಕರಾವಳಿ ಭಾಗದ ವಿವಿಧೆಡೆ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ ಚಾಪ್ಟರ್ 1' ಚಿತ್ರೀಕರಣ ನಡೆಸಲಾಗುತ್ತಿದೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ತೆರಳುವಾಗ ಎದುರಿನಿಂದ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ವೇಳೆ  ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ‌.

ಅಪಘಾತದ ಸಂದರ್ಭ 20 ನೃತ್ಯ  ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, 6 ಜನರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುಗಳನ್ನು  ಜಡ್ಕಲ್ ಮಹಾಲಕ್ಷ್ಮೀ ಕ್ಲಿನಿಕ್​​ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಮೊಬೈಲ್ ಬಳಕೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಕಲಾವಿದರು ಆರೋಪಿಸಿ, ಚಾಲಕನಿಗೆ ಥಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಟೂರಿಸ್ಟ್ ಚಾಲಕ ಸಂಘದ ಸದಸ್ಯರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ಕೊಲ್ಲೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!