ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಿಸಿಬಿ ಬಲೆಗೆ: ಬಂಧನದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ..!

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಿಸಿಬಿ ಬಲೆಗೆ: ಬಂಧನದಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ..!

ಮಂಗಳೂರು: ಕೊಲೆ ಸೇರಿದಂತೆ ಹಲವು ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ತಂಡ ಬಂಧಿಸಲು ಮುಂದಾಗಿತ್ತು. ಪೊಲೀಸರು ಕಾರ್ಯಾಚರಣೆಯಲ್ಲಿದ್ದ ಸಂದರ್ಭ ಬಂಧನದಿಂದತಪ್ಪಿಸಿಕೊಳ್ಳಲು ಈತ ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪಿಎಸ್‌ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ.

ಉಳ್ಳಾಲದ ಧರ್ಮನಗರ ನಿವಾಸಿಯಾದ ದಾವೂದ್ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಿಆರ್‌ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರೆಡೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕುರಿತು ಪ್ರಕರಣಗಳು ದಾಖಲಾಗಿವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!