ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಡುಪಿ: ನಕ್ಸಲ್ ನಾಯಕ ವಿಕ್ರಂಗೌಡ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ..!

ಉಡುಪಿ: ನಕ್ಸಲ್ ನಾಯಕ ವಿಕ್ರಂಗೌಡ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ..!

ಉಡುಪಿ : ನಕ್ಸಲ್ ಮುಖಂಡ ವಿಕ್ರಂ ಗೌಡ ಅವರ ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿಯಾಗಿದೆ.

ವೇಗವಾಗಿ ಹೋಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ಹೋಗಿದ್ದು, ರಸ್ತೆ ಬದಿಯಲ್ಲಿದ್ದ ಗುಡಿಯೊಳೊಗೆ ವಾಲಿಕೊಂಡು ನಿಂತಿದೆ. ಕೂಡಲೆ ಸ್ಥಳದಲ್ಲಿದ್ದ ಜನರು ಧಾವಿಸಿ, ಆಂಬುಲೆನ್ಸ್ ಅನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ, ಆಂಬುಲೆನ್ಸ್ ವಿಕ್ರಂಗೌಡ ಮೃತದೇಹ ಹೊತ್ತು ಸಾಗಿದೆ.

ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಬಲಿಯಾಗಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ವಿಕ್ರಂ ಗೌಡನ ಅವರ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು. ಬಳಿಕ  ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆಂಬುಲೆನ್ಸ್ ರಸ್ತೆ ಬದಿಗೆ ವಾಲಿದೆ.

‘ಆಂಬುಲೆನ್ಸ್ ವೇಗವಾಗಿ ಸಂಚರಿಸುತ್ತಿದ್ದಾಗ ದಿಢೀರನೆ ದನ ರಸ್ತೆಗೆ ಅಡ್ಡ ಬಂದಿದೆ, ಇದರಿಂದಾಗಿ ಆಂಬುಲೆನ್ಸ್ ರಸ್ತೆ ಬದಿಗೆ ಸರಿದಿದೆ. ಯಾರಿಗೂ ಗಾಯಗಳಾಗಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!