ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಳೆಯ ವೈಷಮ್ಯಕ್ಕೆ ಯುವಕ ಬರ್ಬರ ಹತ್ಯೆ: ಕುಡಗೋಲು, ಮದ್ಯದ ಬಾಟಲಿಯಿಂದ ಹೊಡೆದು ಕೊಲೆ..!

ಹಳೆಯ ವೈಷಮ್ಯಕ್ಕೆ ಯುವಕ ಬರ್ಬರ ಹತ್ಯೆ: ಕುಡಗೋಲು, ಮದ್ಯದ ಬಾಟಲಿಯಿಂದ ಹೊಡೆದು ಕೊಲೆ..!

ಬೆಳಗಾವಿ: ದುಷ್ಕರ್ಮಿಗಳ ತಂಡ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.

ಆಶ್ರಯ ಕಾಲೊನಿ ಶಾಲಾ ಮೈದಾನದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು ಹಳೆಯ ವೈಷಮ್ಯಕ್ಕೆ ರವಿ ತಿಮ್ಮನ್ನವರ(23) ಎಂಬವರನ್ನು ಹತ್ಯೆ ಮಾಡಲಾಗಿದೆ.

13ಕ್ಕೂ ಹೆಚ್ಚು ದುಷ್ಕರ್ಮಿಗಳ ತಂಡ ದಾಳಿ ಮಾಡಿ ಕುಡಗೋಲು, ಮದ್ಯದ ಬಾಟಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಕ್ತ ಮಡುವಿನಲ್ಲಿ ಪ್ರಜ್ಞೆತಪ್ಪಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!