ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೆಬ್ರಿ, ಎಎನ್ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ:

ಹೆಬ್ರಿ, ಎಎನ್ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ:

 

 

ಕಾರ್ಕಳ: ಹೆಬ್ರಿ ಕಬ್ಬಿನಾಲೆಯಲ್ಲಿ ನಡೆದ ಎಎನ್ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆ.

ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಪರಿಸರದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿ, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.

ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!