ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನೆರಿಯ: ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ..!

ನೆರಿಯ: ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ..!

ಬೆಳ್ತಂಗಡಿ:  ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ   ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು , ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದಳು ಎಂದು ತಿಳಿದು ಬರಬೇಕಾಗಿದೆ.ಮಾಹಿತಿ ಪ್ರಕಾರ ಸಣ್ಣ ಮಟ್ಟದ ಪದಾರ್ಥ ಸೇವಿಸಿರುವುದರಿಂದ  ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!