ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಿಕ್ಕಮಗಳೂರು : ದಶಕಗಳ ಬಳಿಕ ಮತ್ತೆ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಗುರುತು: ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ: ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು

ಚಿಕ್ಕಮಗಳೂರು : ದಶಕಗಳ ಬಳಿಕ ಮತ್ತೆ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಗುರುತು: ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ: ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು

ಚಿಕ್ಕಮಗಳೂರು : ಮಲೆನಾಡಿನಲ್ಲಿ ನಕ್ಸಲರಿರುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ.

ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊAಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.

2014 ರ ನಂತರ 2024ರಲ್ಲಿ ಮತ್ತೆ ಕೆಂಪು ಉಗ್ರರ ಹೆಜ್ಜೆ ಗುರುತು ಪತ್ತೆಯಾಗಿರುವ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಗುಪ್ತಚರ ಮಾಹಿತಿ ಆಧಾರದಲ್ಲಿ ನಕ್ಸಲ್ ಬೆಂಬಲಿಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಓರ್ವ ವ್ಯಕ್ತಿಯನ್ನು ಭೇಟಿಯಾಗಲು ಬಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗಡಿಭಾಗದ ಇಬ್ಬರು ಶಂಕಿತ ವ್ಯಕ್ತಿಗಳ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಬಂದ ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು. ಇಬ್ಬರಿಗೆ ಸಂಬAಧಿಸಿದ ಸ್ಥಳದಲ್ಲಿ ಶೋಧ ನಡೆಸಿ ನಾಡ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಕಾರ್ಕಳ ಎ.ಎನ್.ಎಫ್ ಎಸ್ಪಿ ಹಾಗೂ ಚಿಕ್ಕಮಗಳೂರು ಎಸ್ಪಿ ನೇತೃತ್ವದ ತಂಡದ ಪೊಲೀಸರು ನಕ್ಸಲರಿಗೆ ಮಾಹಿತಿ ಹಾಗೂ ಸಹಕಾರ ಹಿನ್ನಲೆಯಲ್ಲಿ ಇಬ್ಬರು ಶಂಕಿತರಿಗೆ ಸಂಬAಧಿಸಿದ ಸ್ಥಳದಲ್ಲಿ ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!