ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನೇತ್ರಾವತಿ , ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ.. ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಶವ ಪತ್ತೆ:

ನೇತ್ರಾವತಿ , ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ.. ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಶವ ಪತ್ತೆ:

 

 

 

ಧರ್ಮಸ್ಥಳ:, ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ಅಕ್ಟೋಬರ್ 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ಧರ್ಮಸ್ಥಳ ಗ್ರಾಮದ  ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ.

ಮೃತ ದಂಪತಿಗಳನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.

 

 

 

ಅಕ್ಟೋಬರ್ 31 ರಂದು ದಂಪತಿಗಳು ನಾಪತ್ತೆಯಾಗಿದ್ದು. ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ‌‌ ಶೌರ್ಯ ತಂಡ ಹಾಗೂ   ಪೊಲೀಸರ ಸಹಕಾರದಲ್ಲಿ  ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಹುಡುಕಾಡಿದಾಗ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ನ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದು. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನವೆಂಬರ್ 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.  ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!