ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಯಿಂದ ‘ಸಂವಿಧಾನ ಅಮೃತ ಮಹೋತ್ಸವ’ ಕಾರ್ಯಕ್ರಮ: “ಸಂವಿಧಾನದ ತಿರುಳು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ”: ಬಸವರಾಜ ಹೊರಟ್ಟಿ

ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಯಿಂದ ‘ಸಂವಿಧಾನ ಅಮೃತ ಮಹೋತ್ಸವ’ ಕಾರ್ಯಕ್ರಮ: “ಸಂವಿಧಾನದ ತಿರುಳು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ”: ಬಸವರಾಜ ಹೊರಟ್ಟಿ

ಬೆಂಗಳೂರು: ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವಾಗಿರುವ ನಮ್ಮ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು, ದೇಶದ ಸಂವಿಧಾನದ ತಿರುಳನ್ನು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಅವರು ನ.26ರಂದು ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಯವರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸಂವಿಧಾನಕ್ಕೆ 75ನೇ ವರ್ಷ - ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಭಾರತದಲ್ಲಿ ಹುಟ್ಟಿರದಿದ್ದರೆ, ನಮ್ಮ ಸಂವಿಧಾನದಲ್ಲಿರುವ ಪರಿಕಲ್ಪನೆಯೇ ಇರುತ್ತಿರಲಿಲ್ಲ. ಅವರು ನೀಡಿರುವ ಸಂವಿಧಾನ ಸ್ವತಂತ್ರ ಭಾರತದ ಮೈಲಿಗಲ್ಲು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸಿ ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅವರು ಹೇಳಿದರು. ಸಂವಿಧಾನದ ವಿಚಾರಗಳನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಗೆ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಿಸಲ್ಪಟ್ಟಿರುವ "ಮನೆ ಮನಕ್ಕೆ ಸಂವಿಧಾನ" ಡಾಕ್ಯೂ ಡ್ರಾಮಾ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಪ್ರಸ್ತುತಿಯ ಸಂವಿಧಾನ ಗೀತೆಯನ್ನು ಬಿಡುಗಡೆಗೊಳಿಸಲಾಯಿತು.

ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂವಿಧಾನ ಕುರಿತು ಸಂದೇಶ ನೀಡಿದರು.

ವಿಧಾನ ಪರಿಷತ್ತು ಸಚಿವಾಲಯದ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ, ವಿಧಾನ ಪರಿಷತ್ತು ಸಚಿವಾಲಯದ ಕಾರ್ಯದರ್ಶಿ ಎಸ್.ನಿರ್ಮಲಾ, ವಿಧಾನಸಭೆ ಸಚಿವಾಲಯದ ಉಪಕಾರ್ಯದರ್ಶಿ ಮೊಹಮ್ಮದ್ ಗೌಸ್ ಕೆ., ವಿಧಾನ ಪರಿಷತ್ತು ಸಚಿವಾಲಯದ ಅಧೀನ ಕಾರ್ಯದರ್ಶಿ ಮೀನಾ ನಾಯಕ್, ವಿಧಾನಸೌಧ ಭದ್ರತಾ ವಿಭಾಗದ ಉಪ ಪೊಲೀಸ್ ಆಯುಕ್ತ ಎಂ.ಎನ್. ಕರಿಬಸವನಗೌಡ ಸೇರಿದಂತೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ನ ಪ್ರಧಾನ ನಿರ್ದೇಶಕ ಅರುಣ ಕುಮಾರ್ ನಾಗರಾಜ್ ದಿವಾಣಜಿ, ಯೋಜನೆಯ ವ್ಯವಸ್ಥಾಪಕ ಕನ್ನಾಯಕನಹಳ್ಳಿ ಕುಮಾರ್ ರಾಮೇಗೌಡ, ಸಂಚಾಲಕರುಗಳಾದ ಎಚ್. ಸತೀಶ್ ಕುಮಾರ್, ಸಿದ್ದಲಿಂಗ ಮೂರ್ತಿ, ಬಿ.ಆರ್. ಬೀರೇಶ್, ಸಂಯೋಜಕರುಗಳಾದ ಸುರೇಶ್ ಪಿ.ಬಿ., ಶರಣಕುಮಾರ್ ದಿವಾಣಜಿ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!