ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಖಾಸಗಿ ಸ್ಲೀಪರ್ ಬಸ್‌ನಲ್ಲಿ ಬೆಂಕಿ: ಕಿಟಕಿಯಿಂದ ಹಾರಿ ಬಚಾವಾದ ಪ್ರಯಾಣಿಕರು..!

ಖಾಸಗಿ ಸ್ಲೀಪರ್ ಬಸ್‌ನಲ್ಲಿ ಬೆಂಕಿ: ಕಿಟಕಿಯಿಂದ ಹಾರಿ ಬಚಾವಾದ ಪ್ರಯಾಣಿಕರು..!

ಹತ್ರಾಸ್: ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಸದಾಬಾದ್ ಕೊತ್ವಾಲಿ ಪ್ರದೇಶದ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯ ಮಿಧವಲಿ ಗ್ರಾಮದ ಬಳಿ ನ.03ರಂದು ಈ ಘಟನೆ ನಡೆದಿದ್ದು, ದೆಹಲಿಯಿಂದ ಪ್ರಯಾಣಿಕರನ್ನು ತುಂಬಿಕೊAಡು ಬಿಹಾರಕ್ಕೆ ಸಂಚರಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಸ್‌ನ ಮೇಲ್ಭಾಗದಲ್ಲಿ ಇರಿಸಲಾಗಿದ್ದ ಲಗೇಜ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಭಯಭೀತರಾದ ಪ್ರಯಾಣಿಕರು ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಪ್ರಯಾಣಿಕರ ಚೀರಾಟ ಕೇಳಿ ಸ್ಥಳೀಯರು ಬಂದು ಕೆಲವು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಯತ್ನಿಸಿದ್ದು, ಆದರೆ ಅಷ್ಟರೊಳಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!