ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಪಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು: ಫಲಿತಾಂಶ ವೀಕ್ಷಿಸುತ್ತಿದ್ದ ಟಿವಿಯನ್ನೇ ಒಡೆದು ಹಾಕಿದ ಬಿಜೆಪಿ ಮುಖಂಡ: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ

ಉಪಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು: ಫಲಿತಾಂಶ ವೀಕ್ಷಿಸುತ್ತಿದ್ದ ಟಿವಿಯನ್ನೇ ಒಡೆದು ಹಾಕಿದ ಬಿಜೆಪಿ ಮುಖಂಡ: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ

ವಿಜಯಪುರ ಜಿಲ್ಲೆ: ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದರಿಂದ ಆಘಾತಗೊಂಡ ಬಿಜೆಪಿಯ ಕಟ್ಟಾ ಅಭಿಮಾನಿಯಾಗಿರುವ, ಬಿಜೆಪಿ ಮುಖಂಡ ವೀರಭದ್ರಪ್ಪ ಬಾಗಿ ಫಲಿತಾಂಶ ವೀಕ್ಷಿಸುತ್ತಿದ್ದ ಟಿವಿಯನ್ನೇ ಒಡೆದು ಹಾಕಿರುವ ಘಟನೆ ನಡೆದಿದೆ.

ಪಟ್ಟಣದ 4ನೇ ವಾರ್ಡಿನ ತಮ್ಮಮನೆಯಲ್ಲಿ ಉಪಚುನಾವಣೆಯ ಫಲಿತಾಂಶ ವೀಕ್ಷಣೆ ವೇಳೆ ಬಿಜೆಪಿಯು ಮೂರು ಕ್ಷೇತ್ರಗಳಲ್ಲಿ ಸೋಲು ಕಂಡಿರುವುದು ತಿಳಿದು, ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಹಾಗೂ ರಾಜ್ಯ ನಾಯಕರ ನಡೆಗೆ ಆಕ್ರೋಶಗೊಂಡು ಟಿವಿಯ ಎತ್ತಿ ತಂದು ಹೊರ ಬಿಸಾಡಿ ಒಡೆದು ಹಾಕಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಬಿಜೆಪಿ ನಾಯಕರಲ್ಲಿ ಹೊಂದಾಣಿಕೆ ಇಲ್ಲದ ಕಾರಣ ನಮಗೆ ಸೋಲಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಬಿಜೆಪಿ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಹಾಗೂ ಇತರ ನಾಯಕರಲ್ಲಿ ಹೊಂದಾಣಿಕೆಯ ಕೊರತೆಯಿಂದ ಇಂತಹ ದುಃಸ್ಥಿತಿ ಬಂದಿದೆ. ರಾಷ್ಟ್ರೀಯ ನಾಯಕರು ಮಧ್ಯಸ್ಥಿಕೆ ವಹಿಸಿ ರಾಜ್ಯ ನಾಯಕರ ಒಗ್ಗೂಡಿಸಬೇಕು ಇಲ್ಲದಿದ್ದಲ್ಲಿ ಬಿಜೆಪಿ ಇನ್ನೂ ದುಸ್ಥಿತಿಗೆ ಹೋಗುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!