ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು: ಚಿರತೆ ದಾಳಿಗೆ ಮಹಿಳೆ ಬಲಿ..!: ರುಂಡವಿಲ್ಲದ ಮೃತದೇಹ ಪತ್ತೆ.!

ಬೆಂಗಳೂರು: ಚಿರತೆ ದಾಳಿಗೆ ಮಹಿಳೆ ಬಲಿ..!: ರುಂಡವಿಲ್ಲದ ಮೃತದೇಹ ಪತ್ತೆ.!

ಬೆಂಗಳೂರು : ಚಿರತೆ ದಾಳಿಗೆ ಮಹಿಳೆಯೋರ್ವರು ಬಲಿಯಾದ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ಕರಿಯಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದೆ. ಬಳಿಕ ರುಂಡವಿಲ್ಲದ ಮೃತದೇಹ ಪತ್ತೆಯಾಗಿದೆ.

ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿತ್ತು. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!