ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೆಗ್ಗಡೆಯವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಟ್ ಗೆ ಸೇರ್ಪಡೆ:ಪುರಾತನ ವಸ್ತುಗಳ ಭವ್ಯ ಸಂಗ್ರಹ ಹೊಂದಿರುವ ಸಾಧನೆ ಮಾಡಿದ ಡಾ.ವೀರೇಂದ್ರ ಹೆಗ್ಗಡೆಯವರು:ಹುಟ್ಟು ಹಬ್ಬದಂದೇ ಲಭಿಸಿತು ವಿಶೇಷ ಪುರಸ್ಕಾರ, ಹೆಗ್ಗಡೆ ದಂಪತಿಗೆ ಪ್ರಮಾಣಪತ್ರ ಹಸ್ತಾಂತರ

ಹೆಗ್ಗಡೆಯವರ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಟ್ ಗೆ ಸೇರ್ಪಡೆ:ಪುರಾತನ ವಸ್ತುಗಳ ಭವ್ಯ ಸಂಗ್ರಹ ಹೊಂದಿರುವ ಸಾಧನೆ ಮಾಡಿದ ಡಾ.ವೀರೇಂದ್ರ ಹೆಗ್ಗಡೆಯವರು:ಹುಟ್ಟು ಹಬ್ಬದಂದೇ ಲಭಿಸಿತು ವಿಶೇಷ ಪುರಸ್ಕಾರ, ಹೆಗ್ಗಡೆ ದಂಪತಿಗೆ ಪ್ರಮಾಣಪತ್ರ ಹಸ್ತಾಂತರ

 

 

ಬೆಳ್ತಂಗಡಿ: 76 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ.

 

                    

ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ 76ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು.

ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಠ ಸೇವೆಯಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

7 ಸಾವಿರದ ಐನ್ನೂರಕ್ಕೂ ಅಧಿಕ ತಾಳೆಗರಿ ಹಸ್ತಪ್ರತಿಗಳು, 21 ಸಾವಿರ ಕಲಾತ್ಮಕ ವಸ್ತುಗಳು, 25 ಸಾವಿರ ಅಪೂರ್ವ ಪ್ರಾಚೀನ ಗ್ರಂಥಗಳು ಹಾಗೂ ನೂರಕ್ಕೂ ಮಿಕ್ಕಿ ವಿಂಟೇಜ್ ಕಾರುಗಳ ಸಂಗ್ರಹದ ಬಗ್ಗೆ ಹೆಗ್ಗಡೆಯವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!