ಕಾರ್ಕಳ ತಾಲೂಕು ಬೋಳ ಗ್ರಾಮದಲ್ಲಿ ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳಲ್ಲಿ ಗೋವಾದಿಂದ ಅಕ್ರಮವಾಗಿ ತರಿಸಿಕೊಂಡಿರುವ ಮದ್ಯವನ್ನು ಸಂಗ್ರಹಿಸಿಡಲಾಗಿತ್ತು. ಅಲ್ಲದೆ ಮನೆಯಿಂದಲೇ ಲಿಕ್ಕರ್ ವ್ಯವಹಾರ ನಡೆಸುತ್ತಿದ್ದ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನಲೆ ದಾಳಿ ಮಾಡಿದ ಉಡುಪಿ ಅಬಕಾರಿ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ 200 ಕ್ಕೂ ಅಧಿಕ ಬಾಕ್ಸ್ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Home › ಕಾರ್ಕಳ: ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ: ಅಬಕಾರಿ ಅಧಿಕಾರಿಗಳಿಂದ ದಾಳಿ: ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯ ವಶ..!