ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ:

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ:

 

 

 

ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16  ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು ಜನರ ಬದುಕಿಗೆ ಬೆಳಕಾದ ಅಭಿವೃದ್ದಿಯ ರೂವಾರಿ , ದೈವ, ದೇವಸ್ಥಾನಗಳ ಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿ ಕರಾವಳಿಯ ನೂರಾರು ಸಂಘ ಸಂಸ್ಥೆಗಳಿಗೆ ನೆರವಿನ ಶಕ್ತಿ ನೀಡಿದ ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಒಲಿದು‌ ಬಂದಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸಮಾರಂಭ ಜರಗಲಿದೆ ಎಂದು ಟ್ರಸ್ಟಿನ ಸ್ಥಾಪಕಾಧ್ಯಕ್ಷ  ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದ್ದರಲ್ಲದೇ ಸಮಾರಂಭದಲ್ಲಿ ಇತರ ಸಂಘ ಸಂಸ್ಥೆಗಳಿಗೂ ಗೌರವಾರ್ಪಣೆ ಮಾಡುವ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!