ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಟಾಕಿ ಹಚ್ಚುವ ವಿಚಾರದಲ್ಲಿ ಸವಾಲು: ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ: ಚಾಲೆಂಜ್ ಏನಾಗಿತ್ತು ಗೊತ್ತಾ..?

ಪಟಾಕಿ ಹಚ್ಚುವ ವಿಚಾರದಲ್ಲಿ ಸವಾಲು: ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ: ಚಾಲೆಂಜ್ ಏನಾಗಿತ್ತು ಗೊತ್ತಾ..?

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸ್ನೇಹಿತರ ಮೋಜು, ಮಸ್ತಿ ಇದ್ದಿದ್ದೇ. ಆದರೆ ಇಲ್ಲೊಂದೆಡೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ನಡೆದಿದೆ.

ಅ.31ರಂದು ಯುವಕರೆಲ್ಲ ಸೇರಿ ಪಟಾಕಿ ಹಚ್ಚುವಾಗ, ಚಾಲೆಂಜ್ ಒಂದನ್ನು ಹಾಕಿದ್ದರು. ಡಬ್ಬದ ಕೆಳಗೆ ಪಟಾಕಿ ಇರಿಸಿ, ಅದರ ಮೇಲೆ ಶಬರೀಶ್ ನನ್ನು ಕೂರಿಸಿ ತಾನು ಪಟಾಕಿ ಸಿಡಿಯುವವರೆಗೂ ಡಬ್ಬದ ಮೇಲೆ ಕುಳಿತುಕೊಳ್ಳಬೇಕು ಎಂದು ಸವಾಲೆಸೆದಿದ್ದರು. ಚಾಲೆಂಜ್ ಗೆ ಒಪ್ಪಿಕೊಂಡ ಶಬರೀಶ ಸವಾಲಲ್ಲಿ ಗೆದ್ದರೆ ನನಗೆ ಆಟೋ ರಿಕ್ಷಾ ಕೊಡಿಸಬೇಕು ಎಂದಿದ್ದ. ಅದಕ್ಕೆ ಸ್ನೇಹಿತರು ಒಪ್ಪಿದ್ದರು.

ಅದರಂತೆ ಭಾರೀ ಪಟಾಕಿಯನ್ನು ಇರಿಸಿ ಅದಕ್ಕೆ ಬೆಂಕಿ ಹಚ್ಚಿದ್ದ ಆತನ ಸ್ನೇಹಿತರು, ಡಬ್ಬದ ಮೇಲೆ ಶಬರೀಶನನ್ನು ಕೂರಿಸಿದ್ದರು. ಪಟಾಕಿ ಸಿಡಿದ ರಭಸಕ್ಕೆ ಶಬರೀಶನ ಖಾಸಗಿ ಅಂಗ ತೀವ್ರವಾಗಿ ಸುಟ್ಟ ಗಾಯವಾಗಿತ್ತು. ತಕ್ಷಣ ಶಬರೀಶನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.

ಘಟನೆ ಸಂಬAಧ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಠಾಣೆ ಪೊಲೀಸರು, ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್ ಎಂಬುವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!