ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದ ವೇಗದೂತ ಟಿಂಬರ್ ಲಾರಿ: ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವು: “ಜಾಮೀನುರಹಿತ ಶಿಕ್ಷಾರ್ಹ ನರಹತ್ಯೆ ಪ್ರಕರಣ” ದಾಖಲು

ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದ ವೇಗದೂತ ಟಿಂಬರ್ ಲಾರಿ: ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವು: “ಜಾಮೀನುರಹಿತ ಶಿಕ್ಷಾರ್ಹ ನರಹತ್ಯೆ ಪ್ರಕರಣ” ದಾಖಲು

ತ್ರಿಶೂರ್: ರಸ್ತೆ ಬದಿ ಮಲಗಿದ್ದವರ ಮೇಲೆ ಟಿಂಬರ್ ಲಾರಿ ಹರಿದು ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ಸಂಭವಿಸಿದೆ.

ತ್ರಿಶೂರ್ ಜಿಲ್ಲೆಯ ನಾಟಿಕಾದಲ್ಲಿ ಇಂದು ನಸುಕಿನ ಜಾವ 4 ಗಂಟೆಯ ಸುಮಾರಿಗೆ ಈ ಭೀಕರ ಘಟನೆ ಸಂಭವಿಸಿದೆ. ಮೃತರೆಲ್ಲರೂ ಅಲೆಮಾರಿ ಸಮುದಾಯದರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಇರದ ಹಿನ್ನೆಲೆಯಲ್ಲಿ ಜನರು ರಸ್ತೆ ಮೇಲೆ ಟೆಂಟ್ ಹಾಕಿ ಮಲಗಿದ್ದರು. ಲಾರಿ ಚಾಲಕ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಇದೇ ರಸ್ತೆಗೆ ನುಗ್ಗಿದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಳಿಕ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದ. ಸ್ಥಳೀಯರು, ತಕ್ಷಣವೇ ಕಾರ್ಯಪ್ರವೃತ್ತರಾಗಿ ಆತನನ್ನು ಹಿಡಿದಿದ್ದಾರೆ. ಬಳಿಕ ಪೊಲೀಸರು ಕಣ್ಣೂರು ಮೂಲದ ಲಾರಿ ಚಾಲಕ ಜೋಶ್ (54) ಮತ್ತು ಕ್ಲೀನರ್ ಅಲೆಕ್ಸ್ (33) ಎಂಬಿಬ್ಬರನ್ನು ಬಂಧಿಸಿದ್ದಾರೆ.

ಚಾಲಕ ಅಲೆಕ್ಸ್ ಮದ್ಯ ಸೇವಿಸಿರುವುದು ದೃಢಪಟ್ಟಿದ್ದು, ಜೊತೆಗೆ ಈತನಲ್ಲಿ ಚಾಲನಾ ಪರವಾನಗಿಯೂ ಇಲ್ಲದಿರುವುದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಭಾರತೀಯ ನ್ಯಾಯಸಂಹಿತೆ ಅಡಿಯಲ್ಲಿ “ಜಾಮೀನುರಹಿತ ಶಿಕ್ಷಾರ್ಹ ನರಹತ್ಯೆ ಪ್ರಕರಣ” ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತ್ರಿಶೂರ್ ನಗರ ಪೊಲೀಸ್ ಆಯುಕ್ತ ಆರ್.ಇಳಂಗೋ ತಿಳಿಸಿದರು.

ಘಟನೆಯಲ್ಲಿ 7 ಜನ ಗಾಯಗೊಂಡಿದ್ದು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!