ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ದಾಖಲೆ ರಹಿತ ಅಕ್ರಮ ಕಬ್ಬಿಣದ ಗುಜರಿ ವಸ್ತುಗಳ ಸಾಗಾಟ: ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ಜಪ್ತಿ:

ಬೆಳ್ತಂಗಡಿ : ದಾಖಲೆ ರಹಿತ ಅಕ್ರಮ ಕಬ್ಬಿಣದ ಗುಜರಿ ವಸ್ತುಗಳ ಸಾಗಾಟ: ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ಜಪ್ತಿ:

 

 

ಬೆಳ್ತಂಗಡಿ : ಪರವಾನಿಗೆ ರಹಿತವಾಗಿ ಸಾಗಿಸುತ್ತಿದ್ದ ಕಬ್ಬಿಣದ ಸ್ಕ್ರ್ಯಾಪ್ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಸುಮಾರು 9 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು. ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.

ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು. ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!