ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ಪೊಲೀಸ್ ವಶ

ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ಪೊಲೀಸ್ ವಶ

ಚಿಕ್ಕಮಗಳೂರು: 6 ಜನ ನಕ್ಸಲರು ಶರಣಾಗತಿಯಾದ ಬೆನ್ನಲ್ಲೇ ಅವರೊಂದಿಗೆ ಇದ್ದ ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೊಪ್ಪ ತಾಲೂಕು ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಲೆಗುಳಿ ಕುಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ. ಎಕೆ 56, 303 ರೈಫಲ್, ಸ್ವದೇಶೀ ನಿರ್ಮಿತ ಪಿಸ್ತೂಲ್, 7.62 ಎಂಎಂ ಎಕೆ ಮದ್ದುಗುಂಡು, 303 ರೈಫಲ್ ಮದ್ದುಗುಂಡು,  ಬೋರ್ ಕರ‍್ಟ್ರಿಜ್ಗಳು, ಸ್ವದೇಶಿ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು ಸೇರಿದಂತೆ ಒಟ್ಟು 176 ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಜಯಪುರ ಪಿಎಸ್ ನಲ್ಲಿ ಅಪರಾಧ ಸಂಖ್ಯೆ 14/25 ರಲ್ಲಿ ಕಲಂ 3, 25(1), 7 & 25(10) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!