ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ..!: ನಗದು, ಚಿನ್ನಾಭರಣ ಸಮೇತ ಪರಾರಿಯಾದ ಐವರು ಮುಸುಕುಧಾರಿಗಳು: “ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ”: ಯುಟಿ ಖಾದರ್

ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ..!: ನಗದು, ಚಿನ್ನಾಭರಣ ಸಮೇತ ಪರಾರಿಯಾದ ಐವರು ಮುಸುಕುಧಾರಿಗಳು: “ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ”: ಯುಟಿ ಖಾದರ್

ಮಂಗಳೂರು: ಬೀದರ್ ನಲ್ಲಿ ನಡೆದ ಎಟಿಎಂ ದರೋಡೆ ಪ್ರಕರಣ ಉಳ್ಳಾದಲ್ಲಿ ಇಂದು (ಜ.17) ಮರುಕಳಿಸಿದೆ.

ಉಳ್ಳಾಲ ತಾಲೂಕಿನ ಕೆಸಿ ರೋಡ್‌ನ ಕೋಟೆಕಾರು ಬ್ಯಾಂಕ್‌ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಕೂಡ ಬ್ಯಾಂಕ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, ಕೆಸಿ ರೋಡ್‌ನ ಕೋಟೆಕಾರು ಬ್ಯಾಂಕ್‌ನಲ್ಲಿ ಚಿನ್ನಾಭರಣ, ನಗದು ದರೋಡೆಯಾದ ಬಗ್ಗೆ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!