Home › ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ: ಮುಖ್ಯಮಂತ್ರಿ ಸಮ್ಮುಖದಲ್ಲೇ ನಡೆಯಲಿದೆ ಶರಣಾಗತಿ: ನಕ್ಸಲರಿಗೆ ಬೆಂಗಾವಲು ನೀಡಲಿರುವ ಪೊಲೀಸ್ ಪಡೆ
ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ: ಮುಖ್ಯಮಂತ್ರಿ ಸಮ್ಮುಖದಲ್ಲೇ ನಡೆಯಲಿದೆ ಶರಣಾಗತಿ: ನಕ್ಸಲರಿಗೆ ಬೆಂಗಾವಲು ನೀಡಲಿರುವ ಪೊಲೀಸ್ ಪಡೆ
ONLINE PUDU / Wednesday, January 08, 2025

ಚಿಕ್ಕಮಗಳೂರು: ಶಾಂತಿಗಾಗಿ ನಾಗರಿಕ ವೇದಿಕೆ ಆಶ್ರಯದಲ್ಲಿ ಆರು ಮಂದಿ ನಕ್ಸಲರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎದುರು ಶರಣಾಗುತ್ತಾರೆ ಎಂದು ಎನ್ನಲಾಗಿತ್ತು. ಕೊನೆ ಕ್ಷಣದಲ್ಲಿ ನಕ್ಸಲರ ಶರಣಾಗತಿ ಪ್ರಕ್ರಿಯೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಡಿಢೀರ್ ವರ್ಗಾವಣೆಗೊಂಡಿದೆ.
ಸರ್ಕಾರದ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಮುಂದೆ ಶರಣಾಗತಿ ಪ್ರಕ್ರಿಯೆ ನಡೆಯಬೇಕೆಂದು ಸಮಿತಿಯ ಕೆಲವು ಸದಸ್ಯರು ಪಟ್ಟು ಹಿಡಿದ ಕಾರಣ ಅಂತಿಮ ಕ್ಷಣದಲ್ಲಿ ಶರಣಾಗತಿ ಪ್ರಕ್ರಿಯೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ವರ್ಗಾವಣೆಯಾಗಿದೆ.
ಬೆಳಗ್ಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಕಣತಿ ಸಮೀಪ ಬರುತ್ತಿದ್ದಂತೆ ಬೆಂಗಳೂರಲ್ಲಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅವರ ಸಮ್ಮುಖದಲ್ಲೇ ಶರಣಾಗತಿ ಆಗಬೇಕು ಎಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಮತ್ತು ರಾಯಚೂರಿನ ಮಾರಪ್ಪ ಅರೋಲಿ ಶರಣಾಗತಿ ಆಗುತ್ತಿರುವ ನಕ್ಸಲರಾಗಿದ್ದಾರೆ.