ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗಣರಾಜ್ಯೋತ್ಸವ ಸಂದರ್ಭ: ವಿವಿಧೆಡೆ ಬಾಂಬ್ ಸ್ಫೋಟ ಬೆದರಿಕೆ..!: ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ: ಅಪರಿಚಿತನ ವಿರುದ್ಧಎಫ್.ಐ.ಆರ್

ಗಣರಾಜ್ಯೋತ್ಸವ ಸಂದರ್ಭ: ವಿವಿಧೆಡೆ ಬಾಂಬ್ ಸ್ಫೋಟ ಬೆದರಿಕೆ..!: ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ: ಅಪರಿಚಿತನ ವಿರುದ್ಧಎಫ್.ಐ.ಆರ್

ಬೆಂಗಳೂರು: ರಾಜ್ಯ ಅಥವ ರಾಷ್ಟ್ರೀಯ ಹಬ್ಬಗಳ ಸಂದರ್ಭ ಬಾಂಬ್ ಸ್ಫೋಟ ಬೆದರಿಕೆ ಕರೆಗಳು ಬರುತ್ತಿದ್ದು ಇದೀಗ 2025 ಜನವರಿ 26ರ ಗಣರಾಜೋತ್ಸವ ಸಂದರ್ಭದಲ್ಲೂ ಬೆಂಗಳೂರಿನ ವಿವಿಧೆಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯ ಕರೆ ಬಂದಿದೆ.

ಜನವರಿ 9ರಂದು ಸಂಜೆ 5:30ರ ಸುಮಾರಿಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್‌ಗೆ ಕರೆ ಮಾಡಿದ್ದ ಅಪರಿಚಿತ, “6 ಜನರ ಹೆಸರು ಹಾಗೂ ವಿಳಾಸಗಳನ್ನು ತಿಳಿಸಿ ರಾಮೇಶ್ವರಂ ಕೆಫೆಯಲ್ಲಿ ಈ ಹಿಂದೆ ಬಾಂಬ್ ಸ್ಫೋಟವಾದಂತೆ 6 ಜನರು ಗಣರಾಜ್ಯೋತ್ಸವದ ದಿನ ನಗರದ ವಿವಿಧೆಡೆ ಬಾಂಬ್ ಸ್ಫೋಟಿಸಲು ಉದ್ದೇಶಿಸಿದ್ದಾರೆ" ಎಂದು ಹೇಳಿದ್ದಾನೆ.

ಪೊಲೀಸ್ ಕಂಟ್ರೋಲ್ ರೂಮ್ ಪಿಎಸ್ಐ ಓರ್ವರು ನೀಡಿರುವ ದೂರಿನನ್ವಯ ಅಪರಿಚಿತನ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮತ್ತೊಂದೆಡೆ, ಆರೋಪಿ ನೀಡಿದ ಹೆಸರು ಮತ್ತು ವಿಳಾಸಗಳ ಸತ್ಯಾಸತ್ಯತೆಯ ಕುರಿತು ಸಂಬಂಧಪಟ್ಟ ಠಾಣೆಗಳ ಪೊಲೀಸರಿಗೆ ಪರಿಶೀಲಿಸಲು ಸೂಚಿಸಲಾಗಿದೆ.

ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಎಂದು ಕಂಡುಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!