ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚೀನಾದ ಎಚ್‌ಎಂಪಿವಿ ಸೋಂಕಿನ ಬಗ್ಗೆ ಭಾರತದಲ್ಲಿ ಜಾಗೃತಿ: ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಸೋಂಕು ಪತ್ತೆ: ಶ್ವಾಸಕೋಶ ಸಂಬಂಧಿ ಸಮಸ್ಯೆಗಳ ಕುರಿತು ನಿಗಾ ಹೆಚ್ಚಿಸುವಂತೆ ಸೂಚನೆ

ಚೀನಾದ ಎಚ್‌ಎಂಪಿವಿ ಸೋಂಕಿನ ಬಗ್ಗೆ ಭಾರತದಲ್ಲಿ ಜಾಗೃತಿ: ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಸೋಂಕು ಪತ್ತೆ: ಶ್ವಾಸಕೋಶ ಸಂಬಂಧಿ ಸಮಸ್ಯೆಗಳ ಕುರಿತು ನಿಗಾ ಹೆಚ್ಚಿಸುವಂತೆ ಸೂಚನೆ

ನವದೆಹಲಿ: ಚೀನಾದ ಎಚ್‌ಎಂಪಿವಿ ಸೋಂಕಿನ ಬಗ್ಗೆ ಭಾರತದಲ್ಲಿ ಎಚ್ಚರ ವಹಿಸಿದ್ದು ಐಎಲ್‌ಐ ಮತ್ತು ಎಸ್‌ಎಆರ್‌ಐ ಸೇರಿದಂತೆ ವಿವಿಧ ಉಸಿರಾಟ ಅಸ್ವಸ್ಥತೆಗಳ ಕುರಿತು ಕಣ್ಗಾವಲು ಹೆಚ್ಚಿಸಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾತ್ಸವ ಅವರ ನೇತೃತ್ವದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳೊಂದಿಗೆ ಸೋಮವಾರ ನಡೆದ ವರ್ಚುಯಲ್ ಸಭೆಯಲ್ಲಿ ಶ್ವಾಸಕೋಶದ ಅಸ್ವಸ್ಥತೆ ಮತ್ತು ಎಚ್‌ಎಂಪಿವಿ ಕುರಿತು ಎಲ್ಲಾ ಸಾರ್ವಜನಿಕ ಆರೋಗ್ಯ ಕ್ರಮಗಳ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹ್ಯೂಮನ್ ಮೆಟಾನ್ಯೋಮೊವೈರಸ್ ಪ್ರಕರಣಗಳು ಕರ್ನಾಟಕದಲ್ಲಿ ಎರಡು, ತಮಿಳುನಾಡು ಮತ್ತು ಗುಜರಾತ್‌ನಲ್ಲೂ ವರದಿಯಾಗಿದೆ. 2001ರಿಂದಲೂ ಜಾಗತಿಕವಾಗಿ ಈ ಸೋಂಕು ಇರುವುದು  ಕಂಡುಬಂದಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಆತಂಕ ಬೇಡ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಶ್ರೀವಾತ್ಸವ ಪ್ರಕಟಣೆಯಲ್ಲಿ ಒತ್ತಿ ಹೇಳಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!