ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › “ಎಚ್‌ಎಂಪಿವಿ ಸೋಂಕು ಬಗ್ಗೆ ಭಯಪಡಬೇಕಾದ ಅಗತ್ಯವಿಲ್ಲ: ಇದು ಆತಂಕಾರಿಯಾದ ವೈರಸ್ ಅಲ್ಲ: ಚೀನಾದಿಂದ ಬಂದಿಲ್ಲ”: ಮುಖ್ಯಮಂತ್ರಿ ಸಿದ್ದರಾಮಯ್ಯ

“ಎಚ್‌ಎಂಪಿವಿ ಸೋಂಕು ಬಗ್ಗೆ ಭಯಪಡಬೇಕಾದ ಅಗತ್ಯವಿಲ್ಲ: ಇದು ಆತಂಕಾರಿಯಾದ ವೈರಸ್ ಅಲ್ಲ: ಚೀನಾದಿಂದ ಬಂದಿಲ್ಲ”: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಎಚ್‌ಎಂಪಿವಿ ವೈರಾಣುವಿನ ಬಗ್ಗೆ ದೇಶದಲ್ಲಿ ಆತಂಕ ಸೃಷ್ಟಿಯಾಗಿದ್ದು ಆದರೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಗಾಂಧಿಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್‌ಎಂಪಿವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಇದು ಆತಂಕಾರಿಯಾದ ವೈರಸ್ ಅಲ್ಲ. ಅದು ಚೀನಾದಿಂದ ಬಂದಿಲ್ಲ. 2001ರಿಂದಲೇ ಈ ವೈರಾಣು ಪತ್ತೆಯಾಗಿದೆ. ಎಚ್‌ಎಂಪಿ ವೈರಸ್ ಮಕ್ಕಳಿಗೆ, ವಯಸ್ಸಾದವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚಾಗಿ ತಗಲುತ್ತದೆ. ಆದರೆ ಅದು ಅಪಾಯಕಾರಿಯಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದರೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!