ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ; ಮಗುವನ್ನು ಸ್ನಾನ ಮಾಡಿಸಿ ಆರೈಕೆ ಮಾಡಿದ ಸ್ಥಳೀಯರು: ಆರೋಗ್ಯ ಇಲಾಖೆಗೆ ಮಾಹಿತಿ

ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ; ಮಗುವನ್ನು ಸ್ನಾನ ಮಾಡಿಸಿ ಆರೈಕೆ ಮಾಡಿದ ಸ್ಥಳೀಯರು: ಆರೋಗ್ಯ ಇಲಾಖೆಗೆ ಮಾಹಿತಿ

ಶಿವಮೊಗ್ಗ: ಆಗ ತಾನೆ ಜನಿಸಿದ ನವಜಾತ ಶಿಶು ರಸ್ತೆ ಬದಿಯಲ್ಲಿ ಪತ್ತೆಯಾಗಿರುವ ಘಟನೆ ನಗರದ ಶ್ರೀರಾಮಪುರದ ಬಳಿ ನಡೆದಿದೆ.

ಕಳೆದ ರಾತ್ರಿ ಹೆರಿಗೆಯಾಗಿರುವ ಮಗುವೆಂದು ಅಧಿಕಾರಿಗಳು ಅನುಮಾನಿಸಿದ್ದು, ಹೆರಿಗೆಯಾದ ಬಳಿಕ ಮಗುವನ್ನು ಕೈ ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಇಟ್ಟು ಹೋಗಿದ್ದಾರೆ. ಮಗುವನ್ನು ಗಮನಿಸಿದ ಯಾರೋ ಸ್ಥಳೀಯರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಇಲಾಖೆಯವರು ಬರುವ ಮೊದಲೇ ಸ್ಥಳೀಯರು ಮಗುವನ್ನು ರಕ್ಷಿಸಿ ಸ್ನಾನ ಮಾಡಿಸಿ ಆರೈಕೆ ಮಾಡಿದ್ದಾರೆ.

ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗಕ್ಕೆ ದಾಖಲಿಸಿ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಾಭಾಯಿ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದು, ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!