ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಕ್ಕಿಂಜೆ : ಸ.ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ!: 15 ಮಕ್ಕಳು ಅಸ್ವಸ್ಥ: ಸ್ಥಳೀಯ ಆಸ್ಪತ್ರೆಗೆ ದಾಖಲು!

ಕಕ್ಕಿಂಜೆ : ಸ.ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ!: 15 ಮಕ್ಕಳು ಅಸ್ವಸ್ಥ: ಸ್ಥಳೀಯ ಆಸ್ಪತ್ರೆಗೆ ದಾಖಲು!

ಬೆಳ್ತಂಗಡಿ: ಪ್ರಾರ್ಥನಾ ಸಮಯದಲ್ಲಿ ಮಕ್ಕಳ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ ಘಟನೆ ಕಕ್ಕಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ಫೆ.18ರಂದು ಸಂಭವಿಸಿದೆ. ಘಟನೆಯಲ್ಲಿ ಸುಮಾರು 15 ಮಕ್ಕಳು ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಜ್ಜೇನು ದಾಳಿ ನಡೆಸುತ್ತಿದ್ದಂತೆ ಮಕ್ಕಳು ಚೆಲ್ಲಾಪಿಲ್ಲಿಯಾಗಿ ಓಡಿದ್ದು, ಈ ವೇಳೆ ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳು ಅಳುವ ಸದ್ದು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು, ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ.

ಶಾಲೆಯ ಸುತ್ತ ಹೆಜ್ಜೇನುಗಳು ಸುತ್ತಾಡುತ್ತಿದ್ದು ಸ್ಥಳೀಯರು ಬೆಂಕಿ ಹೊಗೆ ಹಾಕಿ ಹೆಜ್ಜೇನುಗಳನ್ನು ಓಡಿಸುವ ಪ್ರಯತ್ನ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!