ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಿಕ್ಕಮಗಳೂರಿನಲ್ಲಿ ಹೆಚ್ಚಾದ ಮಂಗನ ಕಾಯಿಲೆಯ ಭೀತಿ: 7 ಜನರಲ್ಲಿ ಸೋಂಕು ಪತ್ತೆ..!

ಚಿಕ್ಕಮಗಳೂರಿನಲ್ಲಿ ಹೆಚ್ಚಾದ ಮಂಗನ ಕಾಯಿಲೆಯ ಭೀತಿ: 7 ಜನರಲ್ಲಿ ಸೋಂಕು ಪತ್ತೆ..!

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಯ ಭೀತಿ ಹೆಚ್ಚಾಗಿದ್ದು ದಿನೇ ದಿನೇ ಆತಂಕ ಸೃಷ್ಟಿಸುವಂತೆ ಮಾಡಿದೆ. 7 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಗ್ರಾಮಗಳಲ್ಲಿ ಭೀತಿ ಹುಟ್ಟಿಸಿದೆ.

ಮೊದಲು ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆಎಫ್‌ಡಿ ಕಾಣಿಸಿಕೊಂಡಿತ್ತು. ಇದೀಗ 7 ಜನರಲ್ಲಿ ಈ ಕಾಯಿಲೆ ಕಾಣಸಿಕೊಂದೆ. ಈ ಬಗ್ಗೆ ಎಚ್ಚರ ವಹಿಸಿದ ಆರೋಗ್ಯ ಇಲಾಖೆ, ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ. ಗ್ರಾಮದಲ್ಲಿ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದು, ಅರಣ್ಯಗಳಿಗೆ ತೆರಳದಂತೆ ಸೂಚಿಸಿದೆ.

ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕೆಎಫ್‌ಡಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿದ್ದರು. ಈ ವರ್ಷ ಕೆಎಫ್‌ಡಿ ಖಾಯಿಲೆ ತೀವ್ರವಾಗುವ ಮುನ್ನವೇ ಎಚ್ಚರ ವಹಿಸಲಾಗಿದ್ದು ಖಾಂಡ್ಯ ಹೋಬಳಿ ಮತ್ತಿಖಂಡ ಗ್ರಾಮದಲ್ಲಿ ಉಣ್ಣೆಗಳನ್ನ ಸಂಗ್ರಹ ಮಾಡಲಾಗಿದೆ ಜೊತೆಗೆ ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹ ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!